ಅಣ್ಣ ತಂಗಿಯ ಜೀವನದ ಒಂದು ಉತ್ತಮ ಕಾರ್ಯ ಪ್ರೀತಿಯ ಸಂಕೇತ ಒಬ್ಬರನ್ನು ಪರಸ್ಪರ ರಕ್ಷಣೆ ಮಾಡುವ ಮನಸ್ತಾಪವನ್ನು ಹೊಂದಿರುತ್ತಾರೆ.. ರಕ್ಷಾ ಬಂಧನ ಪ್ರಾಚೀನ್ ಕಾಲದಿಂದ ಬಹಳ ಪ್ರಾಮುಖ್ಯತೆ ಹೊಂದ್ದಿದೆ
ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಹಬ್ಬ. ಆ ದಿನ ಸಹೋದರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ.
- ಭಾರತದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯನ್ನು ಯಜುರ್ ಉಪಕರ್ಮ ಎಂದು ಹಿಂದಿನಿಂದ ಆಚರಿಸುತ್ತಿದ್ದಾರೆ. ಈ ದಿನಕ್ಕೆ ಮತ್ತೊಂದು ವಿಶೇಷವಿದೆ. ಮುಂಚೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚು ಪ್ರಚಲಿತವಿದ್ದ 'ರಕ್ಷಾಬಂಧನ' ಅಥವಾ 'ರಾಖಿ' ಹಬ್ಬವನ್ನು ಇತ್ತೀಚಿನ ವರ್ಷಗಳಲ್ಲಿ ಭಾರತ ದಾದ್ಯಂತ ಎಲ್ಲರೂ ಆಚರಿಸುತ್ತಾರೆ. ಆದರೆ ಅಣ್ಣ ತಂಗಿಯರ ಬಾಂಧವ್ಯವನ್ನು ಪ್ರತಿಯೊಬ್ಬರೂ ಭಾವನಾತ್ಮಕವಾಗಿ ಸ್ಮರಿಸುವ ಈ ದಿನ ಬಾಲ್ಯದ ಅನೇಕ ಸಿಹಿ ಕಹಿ ನೆನಪುಗಳನ್ನು ನಮ್ಮ ಮನದಲ್ಲಿ ಮೂಡಿಸುತ್ತದೆ.